Ticker

6/recent/ticker-posts

KFCSC Recruitment 2023 - Apply Online for 386 Vacancy Posts

KFCSC vacancy notification 2023 : ನಮಸ್ಕಾರ ಸ್ನೇಹಿತರೇ, ಇವತ್ತಿನ ಈ ಲೇಖನದಲ್ಲಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ಹಿರಿಯ ಸಹಾಯಕರು, ಸಹಾಯಕ ವ್ಯವಸ್ಥಾಪಕ ಹಾಗೂ ಕಿರಿಯ ಸಹಾಯಕರು ಹುದ್ದೆಗಳ ಬಗ್ಗೆ ಮಾಹಿತಿಯನ್ನು ಪಡೆಯೋಣ. ಕರ್ನಾಟಕ ಸರ್ಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳು ನಾವು ನೀಡಿರುವ ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.


ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವಂತ ಕಿರಿಯ ಸಹಾಯಕರು, ಹಿರಿಯ ಸಹಾಯಕರು ಹಾಗೂ ಗುಣಮಟ್ಟ ನಿರೀಕ್ಷಕರು ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ, ವಯೋಮಿತಿ ವಿವರಣೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಪ್ರತಿದಿನ ಉದ್ಯೋಗದ ಮಾಹಿತಿಯನ್ನು ಪಡೆಯಲು www.premajobsinfo.com ಈ ಅಂತರ್ಜಾಲಕ್ಕೆ ಭೇಟಿ ನೀಡಿ.


KFCSC vacancy notification 2023

ಇಲಾಖೆ ಹೆಸರು : ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ

ಒಟ್ಟು ಹುದ್ದೆಗಳ ಸಂಖ್ಯೆ : 386 ಹುದ್ದೆಗಳು 

ಉದ್ಯೋಗದ ಸ್ಥಳ : ಕರ್ನಾಟಕ

ಹುದ್ದೆಗಳ ಹೆಸರು : ಕಿರಿಯ ಸಹಾಯಕ, ಗುಣಮಟ್ಟ ಪರೀಕ್ಷಕರು

ವೇತನ ಶ್ರೇಣಿ: ಹುದ್ದೆಗಳಿಗೆ ಅನುಗುಣವಾಗಿ 21,400 ರಿಂದ 83,900/- 


KFCSC vacancy details in Kannada

ಕ್ರ.ಸಂಖ್ಯೆಹುದ್ದೆಗಳ ಹೆಸರುಒಟ್ಟು ಹುದ್ದೆಗಳ ಸಂಖ್ಯೆಸಂಬಳ
1ಕಿರಿಯ ಸಹಾಯಕರು1021400-42000
2ಹಿರಿಯ ಸಹಾಯಕರು2327650-52650
3ಹಿರಿಯ ಸಹಾಯಕರು (ಲೆಕ್ಕ)3327650-52650
4ಗುಣಮಟ್ಟ ನಿರೀಕ್ಷಕರು5727650-52650
5ಸಹಾಯಕ ವ್ಯವಸ್ಥಾಪಕರು26343100-83900


KFCSC recruitment 2023 eligibility details in Kannada


ಶೈಕ್ಷಣಿಕ ಅರ್ಹತೆ : 

1. ಸಹಾಯಕ ವ್ಯವಸ್ಥಾಪಕರು - ಸಹಾಯಕ ವ್ಯವಸ್ಥಾಪಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತದಲ್ಲಿ ಕಾನೂನು ರೀತಿಯ ಸ್ಥಾಪಿಸಲ್ಪಟ್ಟ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪರೀಕ್ಷೆಯಲ್ಲಿ ಕನಿಷ್ಠ ಶೇಕಡ 50% ಅಂಕಗಳನ್ನ ಪಡೆದು ತೇರ್ಗಡೆಯಾಗಿರಬೇಕು ಹಾಗೂ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಂಬಿಎ ಪದವಿಯನ್ನು ಹಣಕಾಸು ಅಥವಾ ಮಾರ್ಕೆಟಿಂಗ್ ಅಥವಾ ಮಾನವ ಸಂಪನ್ಮೂಲ ವಿಶೇಷತೆಯೊಂದಿಗೆ ಪಡೆದಿರಬೇಕು.


2. ಹಿರಿಯ ಸಹಾಯಕರು ( ಲೆಕ್ಕ ) - ಹಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತದಲ್ಲಿ ಕಾನೂನು ರೀತಿಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಅಥವಾ ಮಾನ್ಯತೆ ಪಡೆದ ಸಂಸ್ಥೆಯಿಂದ ಪದವಿಯನ್ನು ಪಡೆದಿರಬೇಕು.


3. ಹಿರಿಯ ಸಹಾಯಕರು -ಹಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತದಲ್ಲಿ ಕಾನೂನು ರೀತಿಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಪದವಿ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು ಅಥವಾ ತತ್ಸಮಾನ ಅರ್ಹತೆಯನ್ನು ಪಡೆದಿರಬೇಕು.


4. ದ್ವಿತೀಯ ದರ್ಜೆ ಸಹಾಯಕರು - ಅಭ್ಯರ್ಥಿಗಳು ದ್ವಿತೀಯ ದರ್ಜೆಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದಲ್ಲಿ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಆಗಿರಬೇಕು.


5. ಗುಣಮಟ್ಟ ನಿರೀಕ್ಷಕರು - ಗುಣಮಟ್ಟ ನಿರೀಕ್ಷಕರು ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತದಲ್ಲಿ ಕಾನೂನು ರೀತಿಯ ಸ್ಥಾಪಿಸಲ್ಪಟ್ಟ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಕೃಷಿ ವಿಜ್ಞಾನ ಪದವಿಯನ್ನು ಸಹಕಾರ ಅಥವಾ ಕೃಷಿ ಮಾರುಕಟ್ಟೆ ವಿಶೇಷತೆಯೊಂದಿಗೆ ಪಡೆದಿರಬೇಕು ಅಥವಾ ತತ್ಸಮಾನ ಅರ್ಹತೆಯನ್ನು ಹೊಂದಿರಬೇಕು.


ವಯೋಮಿತಿ ವಿವರಣೆ : 

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಇಲಾಖೆಯ ನಿಯಮಗಳ ಅನ್ವಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 35 ವರ್ಷ ನಿಗದಿಪಡಿಸಿದೆ ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕ್ಕೆ ಸಹ ನೀಡಲಾಗಿದೆ.


ವಯೋಮಿತಿ ಸಡಿಲಿಕೆ ವಿವರಣೆ : 

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - ಗರಿಷ್ಠ 35 ವರ್ಷ

ಪ್ರವರ್ಗ 2a,2b,3a,3b ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ

ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ವರ್ಗದವರಿಗೆ ಗರಿಷ್ಠ 40 ವರ್ಷ


ಅರ್ಜಿ ಶುಲ್ಕ : 

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂಪಾಯಿ 500/-

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವರ್ಗದವರಿಗೆ 200/-

ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 100/-

ಪ್ರವರ್ಗ 2a,2b,3a,3b ವರ್ಗದ ಅಭ್ಯರ್ಥಿಗಳಿಗೆ 300/-


ಆಯ್ಕೆ ವಿಧಾನ : 

ಕರ್ನಾಟಕ ಆಹಾರ ಸರಬರಾಜು ನಿಗಮ ನಿಯಮಿತ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನ್ವಯ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.


ಪರೀಕ್ಷಾ ಕೇಂದ್ರಗಳು ಈ ಕೆಳಗಿನಂತೆ :

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮಗೆ ಹತ್ತಿರ ಹಾಗೂ ಸಮೀಪ ಇರುವ ಸ್ಥಳವನ್ನು ಆಯ್ಕೆ ಮಾಡಿಕೊಳ್ಳಬಹುದು ಸ್ಥಳದ ವಿವರಣೆ, ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಬೆಳಗಾವಿ ಮತ್ತು ಕಲಬುರ್ಗಿ, ಬಿಜಾಪುರ, ಶಿವಮೊಗ್ಗ ಮತ್ತು ತುಮಕೂರು ಕೇಂದ್ರಗಳಲ್ಲಿ ನಡೆಸಲಾಗುವುದು.

How To Aplly KFCSC vacancy Post

ಅರ್ಜಿ ಸಲ್ಲಿಸುವ ವಿಧಾನ :
1. ಅಭ್ಯರ್ಥಿಗಳು ಮೊದಲನೇದಾಗಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಇಲಾಖೆಯ ಅಧಿಸೂಚನೆ 2023 ಸಂಪೂರ್ಣವಾಗಿ ಓದಿಕೊಂಡು ಮತ್ತು ಇಲಾಖೆ ನಿಗದಿಪಡಿಸಿರುವ ಅರ್ಹತ ಮಾನದಂಡಗಳನ್ನು ಪೂರೈಸಿದ್ದರೆ ಎಲ್ಲಾ ಮಾಹಿತಿಗಳನ್ನು ಖಚಿತ ಪಡಿಸಿಕೊಂಡು ತದನಂತರ ನಾವು ನೀಡುವ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
2. ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಿ, ಭರ್ತಿ ಮಾಡುವಾಗ ಸಂಹವನ ಉದ್ದೇಶಕ್ಕಾಗಿ ನಿಮ್ಮ ಬಳಿ ಇರುವ ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿ ಮುಂತಾದವುಗಳನ್ನು ಒದಗಿಸಿ. ಅಲ್ಲಿ ಕೇಳುವ ನಿಮ್ಮ ಶಾಲಾ ಪುರಾವೆಗಳಾದ ಅಂಕಪಟ್ಟಿ, ಜಾತಿ ಆದಾಯ, ವೋಟರ್ ಐಡಿ ಕಾರ್ಡ್ ಮುಂತಾದ ದಾಖಲೆಗಳನ್ನು ಒದಗಿಸಬೇಕು.
3. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕರು, ಹಿರಿಯ ಸಹಾಯಕರು, ಕಿರಿಯ ಸಹಾಯಕರು ಮುಂತಾದ ಹುದ್ದೆಯ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.
4. ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಆನ್ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯ ಇರುವ ಎಲ್ಲಾ ವಿವರಗಳನ್ನು ಸರಿಯಾಗಿ ನಮೂದಿಸಿ ಒಮ್ಮೆ ಪರಿಶೀಲಿಸಿ ಹಾಗೂ ನಿಮ್ಮ ಇತ್ತೀಚಿನ ಭಾವಚಿತ್ರ ಪ್ರಮಾಣ ಪತ್ರಗಳು ಮುಂತಾದ ದಾಖಲೆಗಳನ್ನು. ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
5. ನಿಮ್ಮ ವರ್ಗದ ಅರ್ಜಿ ಮೊತ್ತವನ್ನು ಪಾವತಿ ಮಾಡಿ ಅದರ ಜೆರಾಕ್ಸ್ ಪ್ರತಿಯನ್ನು ನಿಮ್ಮ ಬಳಿ ಇಟ್ಟುಕೊಳ್ಳಿ.
6. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ನೇಮಕಾತಿ 2023 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸಿ ಎಂಬುದರ ಮೇಲೆ ಕ್ಲಿಕ್ ಮಾಡಿ ನೀವು ಸಂಪೂರ್ಣವಾಗಿ ಅರ್ಜಿಯನ್ನು ಸಲ್ಲಿಸುತ್ತೀರಿ.



ಪ್ರಮುಖ ದಿನಾಂಕಗಳು :
ಅರ್ಜಿಯನ್ನ ಸಲ್ಲಿಸಲು ಆರಂಭದ ದಿನಾಂಕ 23 ಜೂನ್ 2023
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 22 ಜೂನ್ 2023



ಮುಖ್ಯ ಪದಗಳು :
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ನೇಮಕಾತಿ 2023 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ದಯವಿಟ್ಟು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ನಿಮ್ಮ ಸ್ನೇಹಿತ ಹಾಗೂ ಸ್ನೇಹಿತರಿಗೆ ಈ ಮಾಹಿತಿಯನ್ನು ಕಳಿಸಿರಿ.



Prema jobs info ಅಂತರ್ಜಲದ ಬಗ್ಗೆ ಸಣ್ಣ ಟಿಪ್ಪಣಿ


1. ಈ ಅಂತರ್ಜಾಲ ಉದ್ಯೋಗ ಮಾಹಿತಿ ಹುಡುಕುವ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ.
2. ಈ ಅಂತರ್ಜಾಲ ಕರ್ನಾಟಕದ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಉಪಯೋಗವಾಗಲಿದೆ ಇದರಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಖಾಸಗಿ ಸಂಸ್ಥೆಗಳು ಹೊರಡಿಸುವ ಉದ್ಯೋಗದ ಮಾಹಿತಿಯನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ಮಾಡುತ್ತದೆ.
3. ಈ ಅಂತರ್ಜಾಲವೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಸ್ಥಾಪಿಸಲಾಗಿದೆ ಇಲ್ಲಿ ಯಾವುದೇ ರೀತಿಯ ಮೋಸ ಅಥವಾ ಸುಳ್ಳು ಮಾಹಿತಿಯನ್ನು ನೀಡಲಾಗುವುದಿಲ್ಲ
4. ಕರ್ನಾಟಕದಲ್ಲಿ ಹಲವಾರು ರೀತಿಯ ಅಂತರ್ಜಾಲಗಳು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತವೆ ಆದರೆ ಈ ಅಂತರಜಾಲ ನಿಮಗೆ ಉಪಯುಕ್ತವಾದ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತದೆ.
5. ಕೇವಲ ಉದ್ಯೋಗ ಮಾಹಿತಿ ಅಲ್ಲದೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡುತ್ತದೆ.
6. ಈ ಅಂತರ್ಜಾಲದ ಕುರಿತು ನಿಮ್ಮ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಬಹುದು ಅಥವಾ ನಮ್ಮನ್ನು ಫೇಸ್ಬುಕ್ ಯೌಟ್ಯೂಬ್ ಮತ್ತು ವಾಟ್ಸಪ್ ಗ್ರೂಪ್ ಗಳ ಮೂಲಕ ಸಹ ನಮ್ಮನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು.


KFCSC Recruitment 2023 - Apply Online for 386 Vacancy Posts


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು