ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಲೇಖನದಲ್ಲಿ ನಾವು ಸಿಬ್ಬಂದಿ ನೇಮಕಾತಿ ಆಯೋಗ ಇಲಾಖೆಯಲ್ಲಿ ಖಾಲಿ ಇರುವ 1,558 ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹಾಗೂ ಹವಾಲ್ದಾರ್ ಹುದ್ದೆಗಳ ಬಗ್ಗೆ ಮಾಹಿತಿಯನ್ನು ತಿಳಿಯೋಣ. ಈ ಹುದ್ದೆಗಳು ಕೇಂದ್ರ ಸಹಕಾರಿ ಹುದ್ದೆಗಳಾಗಿದ್ದು ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿರುವ ಕೊನೆ ದಿನಾಂಕದ ಒಳಗಾಗಿ ಅರ್ಜಿಯನ್ನ ಸಲ್ಲಿಸಬಹುದು.
ಸಿಬ್ಬಂದಿ ನೇಮಕಾತಿ ಆಯೋಗ 2023 ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಎಸ್‌ಎಲ್‌ಸಿ ಅಥವಾ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಅಭ್ಯರ್ಥಿಗಳು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದು ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿ ವಿವರಣೆ, ಉದ್ಯೋಗದ ವಿಧ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
SSC MTS AND HAWALDAR VACANCY NOTIFICATION 2023
ನೇಮಕಾತಿ ಇಲಾಖೆ ಹೆಸರು : ಸಿಬ್ಬಂದಿ ನೇಮಕಾತಿ ಆಯೋಗ
ಒಟ್ಟು ಹುದ್ದೆಗಳ ಸಂಖ್ಯೆ : 1558
ಉದ್ಯೋಗದ ಸ್ಥಳ : ಭಾರತಾದ್ಯಂತ
ಹುದ್ದೆಗಳ ಹೆಸರು : ಮಲ್ಟಿ ಟಾಸ್ಟಿಂಗ್ ಸ್ಟಾಪ್ ಮತ್ತು ಹವಾಲ್ದಾರ್
ವೇತನ ಶ್ರೇಣಿ : 15,000-59,600/-
SSC MTS and Havaldar recruitment 2023 eligibility details
ಮಲ್ಟಿ ಟಾಸ್ಕಿಂಗ್ ಸ್ಟಾಪ್ - ಅಭ್ಯರ್ಥಿಗಳು ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದಲ್ಲಿ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು.
ಹವಾಲ್ದಾರ್ - ಅಭ್ಯರ್ಥಿಗಳು ಹವಾಲ್ದಾರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದಲ್ಲಿ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅಥವಾ ಮೆಟ್ರಿಕ್ಯುಲೇಷನ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
ವಯೋಮಿತಿ ವಿವರಣೆ :
ಸಿಬ್ಬಂದಿ ನೇಮಕಾತಿ ಆಯೋಗ 2023 ಈ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 25 ವರ್ಷ ಪೂರೈಸಿರಬೇಕು. ಮೀಸಲಾತಿ ಅನುಗುಣವಾಗಿ ಉಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಲಾಗಿದೆ ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ :
1. ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ
2. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವರ್ಗದವರಿಗೆ 05 ವರ್ಷ
3. ಅಂಗವಿಕಲ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 03 ವರ್ಷ
ಅರ್ಜಿ ಶುಲ್ಕ :
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಸಾಮಾನ್ಯ ಹಾಗೂ ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ಒಂದು ನೂರು ರೂಪಾಯಿ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
How to apply for SSC MTS and havaldar recruitment 2023
ಅರ್ಜಿ ಸಲ್ಲಿಸುವ ವಿಧಾನ :
1. ಅಭ್ಯರ್ಥಿಗಳು ಮೊದಲನೇದಾಗಿ ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿ 2023ರ ಅಧಿಸೂಚನೆಯನ್ನು ಸಂಪೂರ್ಣವಾಗಿ ಪರಿಶೀಲಿಸಿ ಅರ್ಥೈಸಿಕೊಂಡು ಹಲ್ಲಿ ನೀಡಿರುವ ಮಾಹಿತಿಯನ್ನು ಸ್ಪಷ್ಟವಾಗಿ ಓದಿಕೊಂಡು ನಾನು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತೆ ಇದ್ದೇನೆ ಎಂದು ಖಚಿತಪಡಿಸಿಕೊಂಡ ಬಳಿಕ ಅರ್ಜಿಯನ್ನು ಸಲ್ಲಿಸಲು ಮುಂದಾಗಿ.
2. ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಡ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು. ಅರ್ಜಿ ನಮೂನೆ ಭರ್ತಿ ಮಾಡುವ ಮೊದಲು ದಯವಿಟ್ಟು ಸಂವಹನ ದೃಷ್ಟಿಯಿಂದ ನಿಮ್ಮ ಸರಿಯಾದ ಇ-ಮೇಲ್ ಐಡಿ ಹಾಗೂ ನಿಮ್ಮ ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ರೆಸ್ಯೂಮ್, ಯಾವುದೇ ಅನುಭವಿದ್ದರೆ ಇತ್ತಾದಿ ದಾಖಲೆಗಳನ್ನು ಸಿದ್ಧವಾಗಿರಿಸಿ.
3. ಸಿಬ್ಬಂದಿ ನೇಮಕಾತಿ ಆಯೋಗ ಮಲ್ಟಿ ಟಾಸ್ಕಿನ್ ಸ್ಟಾಪ್ ಹಾಗೂ ಹವಾಲ್ದಾರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ನಿಮಗೆ ಬೇಕಾದ ಹುದ್ದೆಯನ್ನು ಆಯ್ಕೆ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸಿ.
4. ಸಿಬ್ಬಂದಿ ನೇಮಕಾತಿ ಆಯೋಗ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಗತ್ಯ ಇರುವ ಎಲ್ಲಾ ದಾಖಲಾತಿಗಳು ಹಾಗೂ ನಿಮ್ಮ ಇತ್ತೀಚಿನ ಭಾವಚಿತ್ರ ಅಗತ್ಯವಿರುವ ಪ್ರಮಾಣ ಪತ್ರಗಳು ಹಾಗೂ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
5. ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು
6. ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನೀವು ನೀಡಿರುವ ಎಲ್ಲಾ ಮಾಹಿತಿಯನ್ನು ಸ್ಪಷ್ಟವಾಗಿ ಒಂದು ಬಾರಿ ಓದಿಕೊಂಡು ತದನಂತರ ಸಲ್ಲಿಸಿ ಎಂಬುದರ ಮೇಲೆ ಕ್ಲಿಕ್ ಮಾಡಿ ನಿಮ್ಮ ಅರ್ಜಿ ನಮೂನೆಯನ್ನು ಮುದ್ರನ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
SSC recruitment 2023 important dates
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ 30 ಜೂನ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 21 ಜುಲೈ 2023
ಅರ್ಜಿ ತಿದ್ದುಪಡಿ ಕೊನೆಯ ದಿನಾಂಕ 26 - 28 ಜುಲೈ 2023
ಪರೀಕ್ಷೆ ದಿನಾಂಕ ಸಪ್ಟೆಂಬರ್ 2023
ಮುಖ್ಯ ಪದಗಳು :
ಸಿಬ್ಬಂದಿ ನೇಮಕಾತಿ ಆಯೋಗ ಇಲಾಖೆ ನೇಮಕಾತಿ 2023 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ದಯವಿಟ್ಟು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ನಿಮ್ಮ ಸ್ನೇಹಿತ ಹಾಗೂ ಸ್ನೇಹಿತರಿಗೆ ಈ ಮಾಹಿತಿಯನ್ನು ಕಳಿಸಿರಿ.
Prema jobs info ಅಂತರ್ಜಲದ ಬಗ್ಗೆ ಸಣ್ಣ ಟಿಪ್ಪಣಿ
1. ಈ ಅಂತರ್ಜಾಲ ಉದ್ಯೋಗ ಮಾಹಿತಿ ಹುಡುಕುವ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ.
2. ಈ ಅಂತರ್ಜಾಲ ಕರ್ನಾಟಕದ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಉಪಯೋಗವಾಗಲಿದೆ ಇದರಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಖಾಸಗಿ ಸಂಸ್ಥೆಗಳು ಹೊರಡಿಸುವ ಉದ್ಯೋಗದ ಮಾಹಿತಿಯನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ಮಾಡುತ್ತದೆ.
3. ಈ ಅಂತರ್ಜಾಲವೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಸ್ಥಾಪಿಸಲಾಗಿದೆ ಇಲ್ಲಿ ಯಾವುದೇ ರೀತಿಯ ಮೋಸ ಅಥವಾ ಸುಳ್ಳು ಮಾಹಿತಿಯನ್ನು ನೀಡಲಾಗುವುದಿಲ್ಲ
4. ಕರ್ನಾಟಕದಲ್ಲಿ ಹಲವಾರು ರೀತಿಯ ಅಂತರ್ಜಾಲಗಳು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತವೆ ಆದರೆ ಈ ಅಂತರಜಾಲ ನಿಮಗೆ ಉಪಯುಕ್ತವಾದ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತದೆ.
5. ಕೇವಲ ಉದ್ಯೋಗ ಮಾಹಿತಿ ಅಲ್ಲದೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡುತ್ತದೆ.
6. ಈ ಅಂತರ್ಜಾಲದ ಕುರಿತು ನಿಮ್ಮ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಬಹುದು ಅಥವಾ ನಮ್ಮನ್ನು ಫೇಸ್ಬುಕ್ ಯೌಟ್ಯೂಬ್ ಮತ್ತು ವಾಟ್ಸಪ್ ಗ್ರೂಪ್ ಗಳ ಮೂಲಕ ಸಹ ನಮ್ಮನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು.
0 ಕಾಮೆಂಟ್‌ಗಳು